ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವ ವೇಳೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.

ಭಾಷಣದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಭಾಷಣದ ಆರಂಭದಲ್ಲಿ, ‘ದೇಶದ ಜನರು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಮತ್ತೆ ಮತ್ತೆ ತೋರಿಸಿದ್ದಾರೆ. ದೇಶದ ಕೋಟ್ಯಂತರ ಜನರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾನು ಇಲ್ಲಿದ್ದೇನೆ’ ಎಂದು ಹೇಳಿದರು.

‘ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಎನ್ಡಿಎ ಮತ್ತು ಬಿಜೆಪಿಯನ್ನು ಮಹಾ ವಿಜಯದ ಮೂಲಕ ಮರಳಿ ಅಧಿಕಾರಕ್ಕೆ ತರಲು ನೀವು (ವಿರೋಧ ಪಕ್ಷಗಳು) ನಿರ್ಧರಿಸಿರುವುದನ್ನು ನಾನು ಇಂದು ನೋಡುತ್ತಿದ್ದೇನೆ’ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.