ನವದೆಹಲಿ: ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಈ ಹಣಕಾಸು ವರ್ಷ ಅಧಿಕಾರಿಗಳನ್ನು ತರಬೇತಿಗಾಗಿ ವಿದೇಶಗಳಿಗೆ ಕಳುಹಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ಸುರಕ್ಷತೆ ಹಾಗೂ ಮಿತವ್ಯಯ ಕಾಪಾಡುವ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಸಿಬ್ಬಂದಿ ಸಚಿವಾಲಯ ಬುಧವಾರ ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಕೇಂದ್ರೀಯ ತರಬೇತಿ ಸಂಸ್ಥೆಗಳು ಅಧಿಕಾರಿಗಳಿಗೆ ವಿದೇಶದಲ್ಲಿ ತರಬೇತಿ ನೀಡುವ ಇಲ್ಲವೇ ವಿದೇಶಿ ತಜ್ಞರನ್ನು ಆಹ್ವಾನಿಸಿ, ಸಂಸ್ಥೆಯಲ್ಲಿಯೇ ತರಬೇತಿ ಒದಗಿಸುವ ಕಾರ್ಯ ಮಾಡುತ್ತವೆ.

ವಿದೇಶಗಳಲ್ಲಿ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕಾಗಿ ಪ್ರಸಕ್ತ ಬಜೆಟ್ನಲ್ಲಿ ₹238.45 ಕೋಟಿ ತೆಗೆದಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.