ಡೆಹ್ರಾಡೂನ್, ನವದೆಹಲಿ (ಪಿಟಿಐ): ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೋಮವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಕೇಂದ್ರೀಯ ನಾಯಕರನ್ನು ಭೇಟಿಯಾದರು.

ಉತ್ತರಾಖಂಡ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ರಾವತ್ ಅವರು ಬೆಳಿಗ್ಗೆ ದೆಹಲಿಗೆ ದೌಡಾಯಿಸಿದ್ದರು.

ಬಿಜೆಪಿ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಸಿಂಗ್ ಗೌತಮ್ ಅವರು ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ರಾಜಕೀಯ ಪರಿಸ್ಥಿತಿ ಕುರಿತು ನಡೆಸಿದ ಮಾತುಕತೆಯ ವರದಿಯನ್ನು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಆದರೆ, ನಾಯಕತ್ವದ ಬದಲಾವಣೆ ಸಾಧ್ಯತೆಗಳನ್ನು ಪಕ್ಷದ ಹಿರಿಯ ನಾಯಕರು ತಳ್ಳಿ ಹಾಕಿದ್ದಾರೆ. ಉತ್ತರಾಖಂಡದ ಕೆಲವು ನಾಯಕರಿಗೆ ಮುಖ್ಯಮಂತ್ರಿ ಜತೆ ಭಿನ್ನಾಭಿಪ್ರಾಯಗಳಿರುವುದು ನಿಜ. ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಶಾಸಕಾಂಗ ಪಕ್ಷದ ಸಭೆ ನಡೆಯುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ತಿಳಿಸಿದೆ.

ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಮುನ್ನಾ ಸಿಂಗ್ ಚೌಹಾಣ್, ’ಕಾದು ನೋಡಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.