ನವದೆಹಲಿ: ಮೂರು ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಕ್ಕಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ನಾಲ್ವರು ವಕೀಲರ ಹೆಸರುಗಳನ್ನು ಶಿಫಾರಸು ಮಾಡಿತ್ತು. ಆದರೆ, ಈ ದಿಸೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ.

ಸಿಜೆಐ ಚಂದ್ರಚೂಡ್ ಅವರು ಇದೇ 10ರಂದು ನಿವೃತ್ತರಾಗಲಿದ್ದಾರೆ ಎಂಬುದು ಗಮನಾರ್ಹ.

ಹಿರಿಯ ವಕೀಲ ಸೌರಭ್ ಕೃಪಾಲ್ ಅವರನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ಆರ್.ಜಾನ್ ಸತ್ಯನ್ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ಅಮಿತೇಶ್ ಬ್ಯಾನರ್ಜಿ ಹಾಗೂ ಸಾಕ್ಯ ಸೇನ್ ಅವರನ್ನು ಕಲ್ಕತ್ತ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವುದಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು.

ಮತ್ತೊಬ್ಬ ವಕೀಲ ಸೋಮಶೇಖರ್ ಸುಂದರೇಶನ್ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆಯೂ ಶಿಫಾರಸು ಮಾಡಿತ್ತು.

ಈ ವಕೀಲರನ್ನು ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕಳೆದ ವರ್ಷ ಜನವರಿಯಲ್ಲಿ ಕೊಲಿಜಿಯಂ ಮತ್ತೊಮ್ಮೆ ಶಿಫಾರಸು ಮಾಡಿತ್ತು. ಈ ಪೈಕಿ, ಕಳೆದ ವರ್ಷ ನವೆಂಬರ್ನಲ್ಲಿ ಸೋಮಶೇಖರ್ ಸುಂದರೇಶನ್ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ವಕೀಲರಾದ ಕೃಪಾಲ್, ಸತ್ಯನ್, ಬ್ಯಾನರ್ಜಿ ಹಾಗೂ ಸೇನ್ ಅವರ ನೇಮಕಕ್ಕೆ ಸಂಬಂಧಿಸಿದ ಕಡತಗಳನ್ನು ಕೇಂದ್ರ ಸರ್ಕಾರ ಇನ್ನೂ ವಿಲೇವಾರಿ ಮಾಡಿಲ್ಲ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.