ಲಖನೌ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಮುಸ್ಲಿಮರಿಂದ ಯಾವುದೇ ನಕಾರಾತ್ಮಕ ಹೇಳಿಕೆ ಬಂದಿಲ್ಲ ಎಂದು ಬಿಜೆಪಿ ನಾಯಕ, ಕೇಂದ್ರ ಮಾಜಿ ಸಚಿವ ಸೈಯದ್ ಶಹನವಾಜ್ ಹುಸೇನ್ ಹೇಳಿದರು.

ಬಾಲಿಯಾದ ಸಿಕಂದರ್‌ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮ ಮಂದಿರ ನಿರ್ಮಾಣವು ಪೂರ್ವಾಂಚಲ್‌ನ ಸಂಪೂರ್ಣ ಚಿತ್ರಣವನ್ನು ಬದಲಾಯಿಸುತ್ತದೆ. ಜನವರಿ 22ರಂದು ದೇವಸ್ಥಾನ ಉದ್ಘಾಟನೆಯಾಗಲಿದೆ. ದೇವಾಲಯ ಹಾಗೂ ಶ್ರೀರಾಮನ ದರ್ಶನವನ್ನು ಪಡೆಯಲು ದೇಶ ಮತ್ತು ವಿದೇಶಗಳಿಂದ ಜನರು ಆಗಮಿಸುತ್ತಾರೆ ಮತ್ತು ಎಂದಿಗೂ ಜನಸಂದಣಿ ಕಡಿಮೆಯಾಗುವುದಿಲ್ಲ. ಅಂತಹ ಅದ್ಭುತವಾದ ದೇವಾಲಯವನ್ನು ನಿರ್ಮಿಸಲಾಗುತ್ತಿದೆ ಎಂದರು.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಹುಸೇನ್, ‘ಕಾಂಗ್ರೆಸ್, ಆರ್‌ಜೆಡಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಇತರೆ ಪಕ್ಷಗಳು ಹೇಳಿಕೆಗಳನ್ನು ನೀಡುತ್ತಿವೆ. ‘ಇಂಡಿಯಾ’ ಮೈತ್ರಿಕೂಟವು ಸಂಪೂರ್ಣವಾಗಿ ವಿಭಜನೆಯಾಗಲಿದೆ. ರಾಮ ಮಂದಿರದ ವಿಚಾರದಲ್ಲಿ ವಿರೋಧ ಪಕ್ಷಗಳಿಗಿರುವ ಕಷ್ಟವೆನೆಂದರೆ ಅದನ್ನು ನುಂಗಬೇಕೋ ಅಥವಾ ಉಗುಳಬೇಕೋ ಎಂದು ಅವರಿಗೆ ಅರ್ಥವಾಗುತ್ತಿಲ್ಲ’ ಎಂದು ಹೇಳಿದರು.

ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಹೇಳಿಕೆ ನೀಡುವ ಮೂಲಕ ವಿರೋಧ ಪಕ್ಷಗಳು ಶ್ರೀರಾಮನ ವಿರುದ್ಧವೂ ತಿರುಗಿ ಬಿದ್ದಿವೆ. ಇದಕ್ಕೆ ಚುನಾವಣೆಯಲ್ಲಿ ದೇಶದ ಜನತೆ ಉತ್ತರ ನೀಡಲಿದ್ದಾರೆ ಎಂದು ಹುಸೇನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.