ಮಾಲ್ದಾ (ಪಶ್ಚಿಮ ಬಂಗಾಳ): ಬಿಜೆಪಿಯು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಪಶ್ಚಿಮ ಬಂಗಾಳ ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದರು.

ಮಾಲ್ದಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಕಾಯ್ದೆಯು ಯಾರ ಪೌರತ್ವವನ್ನೂ ಕಸಿದುಕೊಳ್ಳುವುದಿಲ್ಲ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದ ನಿರಾಶ್ರಿತರಿಗೆ ಧಾರ್ಮಿಕ ನೆಲೆಗಟ್ಟಿನಲ್ಲಿ ಭಾರತದ ಪೌರತ್ವ ನೀಡಲಿದೆ ಎಂದರು.

‘ರಾಜ್ಯದಲ್ಲಿ ಸಿಎಎ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿನ ಜನರಿಗೆ ಮೋಸ ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.