ನವದೆಹಲಿ: 'ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಮತ್ತು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ' ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜೀತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (ಎನ್ಟಿಎ) 2024ರ ಮೇ 5ರಂದು ನೀಟ್–ಯುಜಿ ನಡೆಸಿತ್ತು. ಅದರಲ್ಲಿ, ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿವೆ. ಈ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮಗ್ರ ತನಿಖೆ ಕೈಗೆತ್ತಿಕೊಂಡಿದೆ ಎಂದಿದ್ದಾರೆ.

ಪರೀಕ್ಷಾ ಆಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರವು, ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ಕಾಯ್ದೆ 2024 ಅನ್ನು ರೂಪಿಸಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.