ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಗೊಳಿಸಿದ ಹಾಗೂ ರಾಜ್ಯದ ವಿಭಜನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಏಳು ಮಂದಿ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಒಪ್ಪಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಪ್ರಕರಣವನ್ನು ವಿಸ್ತ್ರತಪೀಠಕ್ಕೆ ವರ್ಗಾಯಿಸಲು ಕಾರಣಗಳು ಇಲ್ಲ ಎಂದು ಪೀಠ ಹೇಳಿತು.

ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್‌ಕೃಷ್ಣ ಕೌಲ್, ಆರ್. ಸುಭಾಷ್ ರೆಡ್ಡಿ, ಬಿ.ಆರ್. ಗವಾಯ್ ಹಾಗೂ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಕಳೆದ ಜನವರಿ 23ರಂದು ವಿಚಾರಣೆ ಮುಗಿಸಿದ್ದ ಪ್ರಕರಣದ ತೀರ್ಪನ್ನು ಸೋಮವಾರ ಪ್ರಕಟಿಸಿತು.

ಸರ್ಕಾರದ ಪರವಾಗಿ ವಾದಿಸಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಇತರ ಕೆಲವು ಹಿರಿಯ ವಕೀಲರು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಜಮ್ಮು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘ ಹಾಗೂ ಕೆಲವು ವಕೀಲರು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.