ಶ್ರೀನಗರ: ಭಯ, ಭ್ರಷ್ಟಾಚಾರ ಮತ್ತು ಉಗ್ರವಾದದ ದಿನಗಳು ಮುಗಿದಿವೆ ಎಂದು ಪ್ರತಿಪಾದಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕಣಿವೆಯಲ್ಲಿ ಈಗ ಯಾರೂ ಪಾಕಿಸ್ತಾನದ ಧ್ವಜವನ್ನು ಹಾರಿಸುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.

‘ಈ ಸ್ವಾತಂತ್ರ್ಯ ಅಮೃತಮಹೋತ್ಸವದ ಸಮಯದಲ್ಲಿ ನಮ್ಮ ಪೂರ್ವಜರು ಕನಸು ಕಂಡಿದ್ದ ಭಯ–ಮುಕ್ತ, ಭ್ರಷ್ಟಾಚಾರ-ಮುಕ್ತ ಮತ್ತು ಭಯೋತ್ಪಾದನೆ-ಮುಕ್ತ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸುವ ಸಂಕಲ್ಪವನ್ನು ನಾವೆಲ್ಲರೂ ಬಲಪಡಿಸೋಣ’ಎಂದು ಅವರು ಇಲ್ಲಿನ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭವನ್ನು ಉದ್ದೇಶಿಸಿ ಹೇಳಿದರು.

"ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲದ, ಭಾರತದ ಅಭಿವೃದ್ಧಿಯ ಪಯಣದಲ್ಲಿ ಸಮಾನ ಪಾಲುದಾರರಾಗಿ ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು, ಬಡವರು, ಹಿಂದುಳಿದವರಿಗಾಗಿ ಸಮಾನ ಹಕ್ಕುಗಳನ್ನು ಹೊಂದಿರುವ ಸಮಾಜ ನಿರ್ಮಿಸೋಣ’ಎಂದು ಸಿನ್ಹಾ ಹೇಳಿದರು.

ಭಯ, ಭ್ರಷ್ಟಾಚಾರ ಮತ್ತು ಉಗ್ರವಾದದ ದಿನಗಳು ಕಳೆದುಹೋಗಿವೆ ಎಂದು ಪ್ರತಿಪಾದಿಸಿದ ಲೆಫ್ಟಿನೆಂಟ್ ಗವರ್ನರ್, ‘ಕಾಶ್ಮೀರದಲ್ಲಿ ಈಗ ಯಾರೂ ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸುವುದಿಲ್ಲ. ಪ್ರತಿಯೊಬ್ಬರೂ ರಾಷ್ಟ್ರಧ್ವಜವನ್ನು ಪ್ರದರ್ಶಿಸುತ್ತಾರೆ, ರಾಷ್ಟ್ರಧ್ವಜದ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಜನರು ವಿಶೇಷ ಹೆಮ್ಮೆ ಮತ್ತು ಪ್ರೀತಿಯನ್ನು ಹೊಂದಿದ್ದಾರೆ’ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಆಡಳಿತವು, ಪ್ರತಿ ವರ್ಷ ಆಗಸ್ಟ್ 5 ಅನ್ನು ಕಣಿವೆ ರಾಜ್ಯದಾದ್ಯಂತ ಭ್ರಷ್ಟಾಚಾರ ಮುಕ್ತ ದಿನವಾಗಿ ಆಚರಿಸಲು ನಿರ್ಧರಿಸಿದೆ. ಭ್ರಷ್ಟಾಚಾರದ ವಿರುದ್ಧ ವರ್ಷವಿಡೀ ನಿರಂತರ ಆಂದೋಲನ ನಡೆಸಲಾಗುವುದು ಎಂದು ಅವರು ಹೇಳಿದರು.

ವಿಧಿ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಉಲ್ಲೇಖಿಸಿದ ಅವರು, ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ದೀಪವನ್ನು ಬೆಳಗಿಸಿದ್ದಾರೆ ಎಂದು ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದ ಆಡಳಿತವು ಕಳೆದ ಕೆಲವು ವರ್ಷಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದೆ. ವಿವಿಧ ಸವಾಲುಗಳ ಹೊರತಾಗಿಯೂ ಐದು ಪಟ್ಟು ವೇಗದಲ್ಲಿ 50,726 ಯೋಜನೆಗಳನ್ನು ಪೂರ್ಣಗೊಳಿಸಿದೆ’ ಎಂದು ಸಿನ್ಹಾ ಹೇಳಿದರು.

‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಇತಿಹಾಸವನ್ನು ಬರೆಯುತ್ತಿದೆ ಮತ್ತು ಪ್ರತಿ ವಲಯದಲ್ಲಿ ಅಭೂತಪೂರ್ವ ಕಾರ್ಯಕ್ಷಮತೆಯನ್ನು ದಾಖಲಿಸುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.