ನವದೆಹಲಿ: ಎರಡನೆಯ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್‌ಎನ್‌ಜೆಪಿಸಿ) ಕೆಲವು ಶಿಫಾರಸುಗಳನ್ನು ಜಾರಿಗೆ ತರದೆ ಇರುವುದಕ್ಕೆ ಸಂಬಂಧಿಸಿದಂತೆ ಹದಿನೆಂಟು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಮಂಗಳವಾರ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ತಮಿಳುನಾಡು, ಮಧ್ಯಪ್ರದೇಶ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ, ದೆಹಲಿ, ಅಸ್ಸಾಂ, ನಾಗಾಲ್ಯಾಂಡ್, ಮೇಘಾಲಯ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಜಾರ್ಖಂಡ್, ಕೇರಳ, ಬಿಹಾರ, ಗೋವಾ, ಹರಿಯಾಣ ಮತ್ತು ಒಡಿಶಾದ ಮುಖ್ಯ ಕಾರ್ಯದರ್ಶಿಗಳು ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕಿದೆ.

ಅಖಿಲ ಭಾರತ ನ್ಯಾಯಾಧೀಶರ ಸಂಘ ಸಲ್ಲಿಸಿರುವ ಅರ್ಜಿ ಹಾಗೂ ಇತರ 22 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಮಂಗಳವಾರ ಬೆಳಿಗ್ಗೆ ನಡೆಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.