ನಾಗ್ಪುರ: 2014ರ ವಿಧಾನಸಭಾ ಚುನಾವಣೆಗೆ ಮುನ್ನ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ವಿರುದ್ಧ ಬಾಕಿಯಿರುವ ಕ್ರಿಮಿನಲ್ ಮೊಕದ್ದಮೆಗಳ ಮಾಹಿತಿ ಬಹಿರಂಗಪಡಿಸಿಲ್ಲ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಸ್ಥಳೀಯ ನ್ಯಾಯಾಲಯ ಶುಕ್ರವಾರ ದೋಷಮುಕ್ತಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಡಣವೀಸ್ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ ಎಂದು ಸಿವಿಲ್ ನ್ಯಾಯಾಧೀಶ ಎಸ್.ಎಸ್.ಜಾಧವ್ ಹೇಳಿದರು.

‘ತಮ್ಮ ವಿರುದ್ಧ 1996, 1998ರಲ್ಲಿ ದಾಖಲಾಗಿರುವ ವಂಚನೆ ಹಾಗೂ ಪೋರ್ಜರಿ ಪ್ರಕರಣಗಳ ಮಾಹಿತಿಯನ್ನು ಫಡಣವೀಸ್ ಚುನಾವಣಾ ಅಫಿಡವಿಟ್ನಲ್ಲಿ ಬಹಿರಂಗಪಡಿಸಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ’ ವಕೀಲ ಸತೀಶ್ ಉಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

‘ನಮ್ಮ ಪರ ವಕೀಲರು ಮಾಹಿತಿ ಸಂಗ್ರಹಿಸುವಾಗ ಅಚಾತುರ್ಯದಿಂದ ಈ ತಪ್ಪು ನಡೆದಿದೆ. ಉದ್ದೇಶಪೂರ್ವಕವಾಗಿ ಮಾಡಿರುವುದಲ್ಲ’ ಎಂದು ಫಡಣವೀಸ್ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.

‘ಮುಖ್ಯವಲ್ಲದ’ ದೂರಿನ ಪ್ರಕರಣದ ಬಗ್ಗೆ ಉದ್ದೇಶಪೂರ್ವಕವಾಗಿ ಮಾಹಿತಿ ಮರೆಮಾಚುವ ಉದ್ದೇಶ ಹೊಂದಿರಲಿಲ್ಲ. ಫಾರ್ಮ್ 26ರ ಅಫಿಡವಿಟ್ನಲ್ಲಿ ಇವನ್ನು ಸೇರಿಸದೆ ಇರುವುದರ ಹಿಂದೆ ಯಾವುದೇ ದುರುದ್ದೇಶವಿಲ್ಲ, ಕೇವಲ ಅಚಾತುರ್ಯದಿಂದ ಈ ರೀತಿ ಆಗಿದೆ’ ಎಂದು ಏ.15ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಫಡಣವೀಸ್ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.