ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಎರಡನೇ ದಿನವಾದ ಶುಕ್ರವಾರವು ಪ್ರತಿಭಟನೆ ನಡೆಸುತ್ತಿದ್ದಾರೆ.

ನಮಗೆ ಅಯೋಧ್ಯೆ ಬೇಡ ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ತಲೆ ಬುರುಡೆ, ದಿಕ್ಕಾರದ ಘೋಷಣದ ಫಲಕಗಳನ್ನು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ,ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ,ಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ರಾಜ್ಯಗಳು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿಯೇ 21 ದಿನಗಳ ಸಂಸತ್ ಅಧಿವೇಶನ ಕರೆಯಬೇಕೆಂಬುದು ರೈತರ ಇನ್ನೊಂದು ಪ್ರಮುಖ ಬೇಡಿಕೆಯಾಗಿದೆ. ರಾಮಲೀಲಾ ಮೈದಾನದ ಸುತ್ತಾ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.