ಭೋಪಾಲ್: ‘ಈ ಮೊದಲೂ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಈಗಲೂ ಆಗಿಲ್ಲ’. ಹೀಗೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಹೇಳಿದ್ದಾರೆ.

‘ಎಕ್ಸ್’ ಜಾಲತಾಣದಲ್ಲಿ ವಿಡಿಯೊ ಸಂದೇಶ ಹರಿಬಿಟ್ಟಿರುವ ಅವರು, ‘ಬಿಜೆಪಿ ವಹಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತನಾಗಿ ನಾನು ಶ್ರದ್ಧೆಯಿಂದ, ನನ್ನ ಸಾಮರ್ಥ್ಯಕ್ಕೆ ತಕ್ಕಂತೆ, ಪ್ರಾಮಾಣಿಕತೆಯಿಂದ ನಿರ್ವಹಿಸಿದ್ದೇನೆ. ಬಿಜೆಪಿ ಕಾರ್ಯಕರ್ತನಾಗಿರುವುದು ನನ್ನ ಅದೃಷ್ಟ’ ಎಂದಿದ್ದಾರೆ.

‘ನರೇಂದ್ರ ಮೋದಿ ಅವರು ನಮ್ಮ ನಾಯಕರಾಗಿರುವುದು ನಮ್ಮ ಅದೃಷ್ಟ. ಅವರ ಜೊತೆ ಕೆಲಸ ಮಾಡಲು ನನಗೆ ಅವಕಾಶ ದೊರಕಿದೆ. ಭವ್ಯವಾದ, ಸಮೃದ್ಧ ಮತ್ತು ಶಕ್ತಿಶಾಲಿ ಭಾರತವು ಮೋದಿ ಅವರ ನಾಯಕತ್ವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಮೋದಿ ನಮ್ಮ ನಾಯಕರು ಅವರ ಜೊತೆ ಕೆಲಸ ಮಾಡಲು ನಾವು ಯಾವಾಗಲೂ ಹೆಮ್ಮೆ ಪಡುತ್ತೇವೆ ಮತ್ತು ಹರ್ಷಿಸುತ್ತೇವೆ’ ಎಂದಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.