ಲಖನೌ: ‘ಜೈ ಶ್ರೀರಾಮ್‘ ಎಂದು ಘೋಷಣೆ ಕೂಗುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ ಹಾಗೆಯೇ ಅಂಥ ಘೋಷಣೆಯನ್ನು ಕೂಗುವುದರ ಬಗ್ಗೆ ಯಾವುದೇ ಕೆಟ್ಟ ಭಾವನೆ ಹೊಂದುವುದು ಬೇಡ ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ‘ಜೈ ಶ್ರೀರಾಮ್‘ ಎಂಬಂತಹ ಘೋಷಣೆ ಕೂಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆದಿತ್ಯನಾಥ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಮತಾ ಬ್ಯಾನರ್ಜಿಯವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರಿಗೆ ‘ನಮಸ್ಕಾರ‘ ಅಥವಾ ‘ಜೈ ಶ್ರೀರಾಮ್‘ ಎನ್ನುವುದನ್ನು ಒಂದು ಸಂಪ್ರದಾಯ ಮತ್ತು ಶಿಷ್ಟಾಚಾರವಾಗಿ ಪಾಲಿಸುತ್ತಾರೆ. ಹಾಗಾಗಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಬಗ್ಗೆ ಯಾವುದೇ ಕೆಟ್ಟ ಭಾವನೆ ಹೊಂದಬೇಕಿಲ್ಲ. ನಾವೂ ಯಾರಿಗೂ ಈ ಘೋಷಣೆ ಕೂಗಬೇಕೆಂದು ಒತ್ತಡ ಹೇರುವುದಿಲ್ಲ‘ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.