ಕೊಚ್ಚಿ:ಕೇರಳದ ಸೈಲೆಂಟ್ ವ್ಯಾಲಿಯಲ್ಲಿ ನಿತ್ಯಹರಿದ್ವರ್ಣ ಮಳೆಕಾಡುಗಳನ್ನು ವಿನಾಶದಿಂದ ರಕ್ಷಿಸಲು ನಡೆಸಿದ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಸರಾಂತ ಪರಿಸರವಾದಿ ಪ್ರೊ.ಎಂ.ಕೆ.ಪ್ರಸಾದ್ (89) ಸೋಮವಾರ ನಿಧನರಾದರು.

ಕೋವಿಡ್ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅವರ ಸಹೋದ್ಯೋಗಿಗಳು ಹೇಳಿದ್ದಾರೆ.

1970ರ ದಶಕದಲ್ಲಿ ಪಾಲಕ್ಕಾಡ್ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಜಲವಿದ್ಯುತ್ ಯೋಜನೆಯನ್ನು ಸ್ಥಾಪಿಸುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧದ ರಾಷ್ಟ್ರೀಯ ಚಳವಳಿಯಲ್ಲಿ ಪ್ರಸಾದ್ ಪ್ರಮುಖ ಪಾತ್ರ ವಹಿಸಿದ್ದರು. ಪರಿಸರವಾದಿಗಳ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಯೋಜನೆಯನ್ನು ಕೈಬಿಟ್ಟಿತ್ತು. ಸೈಲೆಂಟ್ ವ್ಯಾಲಿ ಅರಣ್ಯಗಳನ್ನು ಸಂರಕ್ಷಿಸಲಾಗುವುದು ಎಂದು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಭರವಸೆ ನೀಡಿದ ನಂತರ 80 ರ ದಶಕದ ಆರಂಭದಲ್ಲಿ ಹೋರಾಟವನ್ನು ಹಿಂತೆಗೆದುಕೊಳ್ಳಲಾಗಿತ್ತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಾಜಿ ಪರಿಸರ ಸಚಿವ ಜೈರಾಮ್ ರಮೇಶ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್ ಅವರು ಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.