ಶಿಲ್ಲಾಂಗ್/ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರದ ಬಿಕ್ಕಟ್ಟು ಬಗೆಹರಿಸಲು ಮತ್ತು ಶಾಂತಿ ನೆಲೆಸುವಂತೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ಆಡಳಿತಾರೂಢ ಬಿಜೆಪಿಗೆ ನೀಡಿರುವ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ (ಎನ್ಪಿಪಿ) ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಜನರು ಭಯದಿಂದ ಬದುಕುತ್ತಿದ್ದು ಅತಿಯಾದ ಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಎನ್ಪಿಪಿ ಮುಖಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಪತ್ರ ಬರೆದಿದ್ದಾರೆ.

ಬಿರೇನ್ ಸಿಂಗ್ ನೇತೃತ್ವದ ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ ಎಂದು ಎನ್ಪಿಪಿ ತಿಳಿಸಿದೆ.

60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ ಎನ್ಪಿಪಿ 7 ಶಾಸಕರನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ 32 ಸ್ಥಾನಗಳನ್ನು ಪಡೆದು ಸರಳ ಬಹುಮತ ಪಡೆದಿದೆ. ಬಿಜೆಪಿ ಮಿತ್ರಪಕ್ಷ ಜೆಡಿಯು ಕೂಡ 6 ಸ್ಥಾನಗಳಲ್ಲಿ ಗೆಲುವು ಕಂಡಿದೆ.
.ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ.ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಭದ್ರತೆ ಹೆಚ್ಚಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.