ಭುವನೇಶ್ವರ: ಸಾಮಾಜಿಕ ಮಾಧ್ಯಮದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ಗೆ ಸಂಬಂಧಿಸಿದಂತೆ ಒಡಿಯಾದ ಸಿನಿಮಾ ನಟ ಬುದ್ಧಾದಿತ್ಯ ಮೊಹಾಂತಿ ವಿರುದ್ಧ ನ್ಯಾಷನಲ್ ಸ್ಟುಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಪೊಲೀಸರಿಗೆ ದೂರು ಸಲ್ಲಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿವಾದಾತ್ಮಕ ಪೋಸ್ಟ್ ಅನ್ನು ಮೊಹಾಂತಿ ಬಳಿಕ ಡಿಲೀಟ್ ಮಾಡಿದ್ದಾರೆ.

ಎನ್ಎಸ್ಯುಐ ಅಧ್ಯಕ್ಷ ಉದಿತ್ ಪ್ರಧಾನ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

'ಬಾಬಾ ಸಿದ್ದೀಕಿ ಅವರನ್ನು ಕೊಲೆ ಮಾಡಿದ ಬಳಿಕ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಅವರ ಮುಂದಿನ ಗುರಿ ರಾಹುಲ್ ಗಾಂಧಿ ಆಗಿರಬಹುದು' ಎಂದು ಮೊಹಾಂತಿ ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿರುವುದಾಗಿ ಪ್ರಧಾನ್ ಹೇಳಿದ್ದಾರೆ.

ಈ ಸಂಬಂಧ ದೂರು ಸ್ವೀಕರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಗಾಂಧಿಗೆ ಸಂಬಂಧಿಸಿದಂತೆ ತಮ್ಮ ಪೋಸ್ಟ್ ಕುರಿತಂತೆ ಮೊಹಾಂತಿ ಕ್ಷಮೆಯಾಚಿಸಿದ್ದಾರೆ. ಯಾರ ಭಾವನೆಗಳಿಗೂ ಧಕ್ಕೆ ಮಾಡುವ ಉದ್ದೇಶ ಇರಲಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 12ರಂದು ಮುಂಬೈಯಲ್ಲಿ ಬಾಬಾ ಸಿದ್ದೀಕಿ ಅವರ ಹತ್ಯೆ ನಡೆದಿತ್ತು.
.Fact Check: ರಾಹುಲ್ ಗಾಂಧಿ–ನಿತೀಶ್ ಕುಮಾರ್ ಭೇಟಿಯ ಚಿತ್ರ ಹಳೆಯದು.ಹರಿಯಾಣದಲ್ಲಿ ಗೆದ್ದ ಬಿಜೆಪಿ: ರಾಹುಲ್ ಗಾಂಧಿ ಮನೆಗೆ ಜಿಲೇಬಿ ರವಾನಿಸಿದ ಕೇಸರಿಪಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.