ನವದೆಹಲಿ: ಜಲಾಂತರ್ಗಾಮಿ ‘ಐಎನ್ಎಸ್ ಅರಿಹಂತ’ದಿಂದಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು (ಎಸ್ಎಲ್ಬಿಎಂ) ಬಂಗಾಳ ಕೊಲ್ಲಿಯಲ್ಲಿ ಶುಕ್ರವಾರ ಯಶಸ್ವಿಯಾಗಿ ಉಡಾಯಿಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

‘ಬಂಗಾಳ ಕೊಲ್ಲಿಯಲ್ಲಿ ಪೂರ್ವನಿರ್ಧರಿತ ಗುರಿಯನ್ನು ಈ ಕ್ಷಿಪಣಿಯು ಬಹಳ ನಿಖರವಾಗಿ ತಲುಪಿತು. ಈ ಕ್ಷಿಪಣಿ ವ್ಯವಸ್ಥೆಯ ಕಾರ್ಯಾಚರಣೆ ಹಾಗೂ ತಾಂತ್ರಿಕ ಪರಿಮಾಣಗಳನ್ನು ಈ ಪರೀಕ್ಷೆ ಸಾಬೀತುಪಡಿಸಿತು. ಇದು ಭಾರತದ ಪಡೆಗಳ ದಾಳಿ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ’ ಎಂದು ಸಚಿವಾಲಯ ಹೇಳಿದೆ.

ಈ ಕ್ಷಿಪಣಿ ವ್ಯವಸ್ಥೆಯನ್ನು ‘ಜಲಾಂತರ್ಗಾಮಿಯಿಂದ ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿ’ (ಎಸ್ಎಲ್ಬಿಎಂ) ಎನ್ನಲಾಗುತ್ತದೆ. ಅಣ್ವಸ್ತ್ರ ದಾಳಿಗೆ ಪ್ರತಿರೋಧ ಒಡ್ಡುವ ಸಾಮರ್ಥ್ಯವನ್ನು ಈ ಕ್ಷಿಪಣಿ ವ್ಯವಸ್ಥೆ ಹೊಂದಿದೆ. ಇದು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ಇಂಥ ಕ್ಷಿಪಣಿ ವ್ಯವಸ್ಥೆಯೂ ಆಗಿದೆ.

‘ಐಎನ್ಎಸ್ ಅರಿಹಂತ’ ಜಲಾಂತರ್ಗಾಮಿಯು 750 ಕಿ.ಮೀ. (ಕೆ–15) ಹಾಗೂ 3,500 ಕಿ.ಮೀ. (ಕೆ–4) ದೂರಕ್ಕೆ ಚಿಮ್ಮಬಲ್ಲ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.