ನವದೆಹಲಿ: ಸುಮಾರು 3.93 ಲಕ್ಷ ವಿದೇಶಿಗರು ತಮ್ಮ ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲೇ ನೆಲೆಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.

ಕಳೆದ ವರ್ಷ ಡಿಸೆಂಬರ್ ವರೆಗಿನ ಅಂಕಿಅಂಶದ ಪ್ರಕಾರ ಸುಮಾರು 3.93 ಲಕ್ಷ ವಿದೇಶಿಗರು ವೀಸಾ ಅವಧಿ ಮೀರಿ ರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಗಳವಾರ ಹೇಳಿದ್ದಾರೆ.

'2019ರಲ್ಲಿ ವೀಸಾ ಅವಧಿ ಮೀರಿದ 25,143 ವಿದೇಶಿಗರು ಭಾರತದಿಂದ ಹಿಂತಿರುಗಿಲ್ಲ. 2020ರಲ್ಲಿ ವೀಸಾ ಅವಧಿ ಮುಗಿದ 40,239 ವಿದೇಶಿಗರು ರಾಷ್ಟ್ರದಲ್ಲೇ ನೆಲೆಸಿದ್ದಾರೆ. 2021ರಲ್ಲಿ ವೀಸಾ ಅವಧಿ ಮುಗಿದ 54,576 ವಿದೇಶಿಗರು ತಮ್ಮ ರಾಷ್ಟ್ರಕ್ಕೆ ವಾಪಸ್ ಆಗಿಲ್ಲ. ಒಟ್ಟಾರೆ 2019ರಿಂದ ಡಿಸೆಂಬರ್ 31, 2021ರ ವರೆಗೆ ವೀಸಾ ಅವಧಿ ಮುಗಿದ ಬಳಿಕವೂ ದೇಶದಲ್ಲೇ ನೆಲೆಸಿರುವ ವಿದೇಶಿಗರ ಸಂಖ್ಯೆ 3,93,421' ಎಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಸಚಿವ ನಿತ್ಯಾನಂದ ರೈ ಅವರು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ರಾಷ್ಟ್ರದಲ್ಲಿ ನೆಲೆಸಿರುವ ವಿದೇಶಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ರೈ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಜನವರಿ 1ರಿಂದಲೇ ಪೂರ್ವಾನ್ವಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.