ಕೊಚ್ಚಿ/ತಿರುವನಂತಪುರ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಜಲಂಧರ್ ಬಿಷಪ್ ಪ್ರಾಂಕೊ ಮುಲಕ್ಕಲ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ಸಾಗುತ್ತಿದ್ದು, ಸಂತ್ರಸ್ತೆಗೆ ನ್ಯಾಯ ದೊರಕಲಿದೆ ಎಂದು ಸರ್ಕಾರ ಹೇಳಿದೆ.

‘ಸರ್ಕಾರವು ಸಂತ್ರಸ್ತೆ ಹಾಗೂ ಬಿಷಪ್ ವಿರುದ್ಧ ಪ್ರತಿಭಟನೆ ನಡೆಸುವ ಕ್ರೈಸ್ತ ಸನ್ಯಾಸಿನಿಯರ ಜೊತೆಗಿದೆ’ ಎಂದು ಸಚಿವ ಇ.ಪಿ. ಜಯರಾಜನ್ ಹೇಳಿದ್ದಾರೆ.

ಬಿಷಪ್ ಬಂಧನಕ್ಕೆ ಆಗ್ರಹಿಸಿ ಕ್ರೈಸ್ತ ಸನ್ಯಾಸಿನಿಯರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಆರೋಪಿಸಿದ ಮರುದಿನ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಹುದ್ದೆಯಿಂದ ತಾತ್ಕಾಲಿಕ ಬಿಡುಗಡೆ:

ಜಲಂಧರ್ ಬಿಷಪ್ ಪ್ರಾಂಕೊ ಮುಲಕ್ಕಲ್ ಅವರನ್ನು ಹುದ್ದೆಯಿಂದ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.

ವಿಚಾರಣೆಗೆ ಹಾಜರಾಗುವ ಕಾರಣ ತಮ್ಮನ್ನು ಹುದ್ದೆಯಿಂದ ತಾತ್ಕಾಲಿಕವಾಗಿ ಬಿಡುಗಡೆಗೊಳಿಸಬೇಕು ಎಂದು ಪ್ರಾಂಕೊ ಅವರು ಪೋಪ್ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿದ್ದರು. ಪೋಪ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.