ಪಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ‘ಭಾರತ್ ಜೋಡೊ ನ್ಯಾಯಯಾತ್ರೆ’ಯು ಜ. 29ರಂದು ಬಿಹಾರ ಪ್ರವೇಶಿಸಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮೂರು ದಿನ ಸಂಚರಿಸಲಿದೆ.

ನ್ಯಾಯಯಾತ್ರೆಯ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗಿ ಎಂದು ಬಿಹಾರದ ಕಾಂಗ್ರೆಸ್ ಘಟಕವು, ‘ಇಂಡಿಯಾ’ ಮೈತ್ರಿಕೂಟದ ಪಾಲುದಾರ ಪಕ್ಷಗಳಿಗೆ ಸೋಮವಾರ ಆಹ್ವಾನ ನೀಡಿದೆ.

‘ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಕಿಶನ್‌ಗಂಜ್ ಜಿಲ್ಲೆ ಮೂಲಕ ರಾಹುಲ್ ಗಾಂಧಿ ಬಿಹಾರ ಪ್ರವೇಶಿಸಲಿದ್ದಾರೆ. ಸಾರ್ವಜನಿಕರೊಂದಿಗೆ ಸಂವಹನ ನಡೆಸಿದ ನಂತರ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಪೂರ್ನಿಯಾದಲ್ಲಿ ಬೃಹತ್ ರ‍್ಯಾಲಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸೇರಿದಂತೆ ’ಇಂಡಿಯಾ‘ ಮೈತ್ರಿಕೂಟದ ಪಕ್ಷಗಳ ಮುಖಂಡರನ್ನು ಆಹ್ವಾನಿಸಿದ್ದೇವೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರೇಮ್ ಚಂದ್ರ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಿಜೆಪಿಯ ಆಡಳಿತವಿರುವ ರಾಜ್ಯಗಳಲ್ಲಿ ಯಾತ್ರೆ ಸಂಚರಿಸುವಾಗ ಅಲ್ಲಿನ ಸರ್ಕಾರಗಳು ಅಡ್ಡಿಪಡಿಸಿವೆ. ಇದನ್ನು ವಿರೋಧಿಸಿ ಪಟ್ನಾದಲ್ಲಿ ಕಪ್ಪು ಬ್ಯಾಡ್ಜ್ ಧರಿಸಿ ಮೆರವಣಿಗೆ ನಡೆಸಲಿದ್ದೇವೆ’ ಎಂದು ಮಿಶ್ರಾ ಇದೇ ವೇಳೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.