ನವದೆಹಲಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ 2023 ಅಕ್ಟೋಬರ್ 29ರಂದು ನಡೆದಿದ್ದ ರೈಲು ಅಪಘಾತದ ವೇಳೆ ರೈಲೊಂದರ ಚಾಲಕ ಮತ್ತು ಸಹ ಚಾಲಕ ಮೊಬೈಲ್ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ತಿಳಿಸಿದರು.

ಈ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರಿಂದ ಚಾಲಕ ಮತ್ತು ಸಹಾಯಕ ಚಾಲಕ ರೈಲಿನ ಚಲನೆಯ ಬಗ್ಗೆ ನಿಗಾವಹಿಸುತ್ತಿದ್ದಾರಾ ಎಂಬುದನ್ನು ತಿಳಿಯಲು ಸಾಧ್ಯವಿದೆ ಎಂದರು.

ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 14ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.