ಬಾಲಸೋರ್: ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ 261 ಮಂದಿ ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಅವಶೇಷಗಳ ಅಡಿಯಿಂದ ರೈಲು ಬೋಗಿ ಮೇಲೆತ್ತುವ ಕಾರ್ಯ ಜಾರಿಯಲಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಭೀಕರ ಅವಘಡ ಸಂಭವಿಸಿತ್ತು.

ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ.

21ನೇ ಶತಮಾನದ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದೆ.

ಪೊಲೀಸರು, ಒಡಿಶಾ ವಿಪತ್ತು ತುರ್ತು ಪ್ರತಿಕ್ರಿಯೆ ತಂಡ, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆ ಎರಡು ವಿಮಾನಗಳನ್ನು ರವಾನಿಸಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಪ್ರಮುಖರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ತನಿಖೆಗೆ ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.