ಭುವನೇಶ್ವರ: ‘ನೀಟ್’ಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಪಟಿಯಾ ಪ್ರದೇಶದಲ್ಲಿರುವ ಖಾಸಗಿ ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಮೃತಪಟ್ಟಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಕಲ್ಯಾಣಿ ಸಾಹು (18) ಎಂದು ಗುರುತಿಸಲಾಗಿದ್ದು, ಕಟಕ್ ಜಿಲ್ಲೆಯ ಸಾಲೆಪುರದವರು ಎಂದು ತಿಳಿಸಿದ್ದಾರೆ.

‘ನೀಟ್ ಅಧ್ಯಯನದ ಒತ್ತಡ ನಿರ್ವಹಿಸಲಾಗದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಆಕೆಯ ತಂದೆ ಮಹೇಶಕುಮಾರ್ ಸಾಹು ಆರೋಪಿಸಿದ್ದಾರೆ.

ಕಲ್ಯಾಣಿ ದೇಹ ನೇತಾಡುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಹಾಸ್ಟೆಲ್ ವಾರ್ಡನ್, ಆಕೆಯ ತಂದೆಗೆ ಮಾಹಿತಿ ನೀಡಿದ್ದಾರೆ. ನಂತರ ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.