ಗುರುಗ್ರಾಮ: ತೈಲ ತುಂಬಿದ ಟ್ಯಾಂಕರ್‌ವೊಂದು ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ದೆಹಲಿ–ಜೈಪುರ ಹೆದ್ದಾರಿಯ ಗುರುಗ್ರಾಮದ ಸಿದ್ರಾವಲಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಜೈಪುರದಿಂದ ಬರುತ್ತಿದ್ದ ತೈಲ ಟ್ಯಾಂಕರ್, ರಸ್ತೆಯ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಕಾರಿಗೆ ಗುದ್ದಿದೆ. ಕಾರಿನೊಳಗಿದ್ದ ಸಿಎನ್‌ಜಿ ಸಿಲಿಂಡರ್‌ಗಳಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸುಟ್ಟು ಹೋಗಿದ್ದಾರೆ. ಕಾರಿನಲ್ಲಿದ್ದವರು ಜೈಪುರಕ್ಕೆ ತೆರಳುತ್ತಿದ್ದರು ಎಂದು ಬಿಲಾಸ್ಪುರ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದ ನಂತರ ತೈಲ ಟ್ಯಾಂಕರ್, ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದು, ವ್ಯಾನ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ತೈಲ ಟ್ಯಾಂಕರ್‌ನ ಚಾಲಕ ಪರಾರಿಯಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತನಿಖಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.