ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದಕ್ಕೆ ರಾಜ್ಯ ಸರ್ಕಾರ ವಿಧಿಸಿರುವ ನಿರ್ಬಂಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು 'ನಿರಾಶಾದಾಯಕ' ಎಂದು ಕರೆದಿದ್ದಾರೆ.

'ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನಿಂದ ತುಂಬಾ ನಿರಾಸೆಯಾಗಿದೆ. ಹಿಜಾಬ್ ಬಗ್ಗೆ ನೀವು ಏನನ್ನು ಯೋಚಿಸುತ್ತೀದ್ದಿರೋ ಅದು ಕೇವಲ ಬಟ್ಟೆಯ ಬಗ್ಗೆ ಅಲ್ಲ. ಬದಲಿಗೆ ಅದು ಮಹಿಳೆಗೆ ತಾನು ಏನನ್ನು ಧರಿಸಬೇಕೆಂದು ಆಯ್ಕೆ ಮಾಡುವ ಹಕ್ಕಿನ ಕುರಿತದ್ದಾಗಿದೆ. 'ಈ ಮೂಲಭೂತ ಹಕ್ಕನ್ನು ನ್ಯಾಯಾಲಯ ಎತ್ತಿಹಿಡಿಯದಿರುವುದು ಅಪಹಾಸ್ಯ' ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಮೆಹಬೂಬಾ ಕೂಡ ಟ್ವೀಟ್ ಮಾಡಿದ್ದು, ಹಿಜಾಬ್ ನಿಷೇಧಿಸಿರುವ ನಿರ್ಧಾರವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನಿಂದಾಗಿ ತೀವ್ರ ಅಸಮಾಧಾನ ಉಂಟಾಗಿದೆ. 'ಒಂದು ಕಡೆ ನಾವು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತೇವೆ. ಆದರೆ, ನಾವು ಒಂದು ಸರಳ ಆಯ್ಕೆಯ ಹಕ್ಕನ್ನು ಅವರಿಗೆ ನಿರಾಕರಿಸುತ್ತಿದ್ದೇವೆ. ಇದು ಕೇವಲ ಧರ್ಮದ ವಿಚಾರ ಅಲ್ಲ. ಬದಲಿಗೆ ಅದು ಅವರ ಆಯ್ಕೆ ಮಾಡುವ ಸ್ವಾತಂತ್ರ್ಯದ ವಿಚಾರ' ಎಂದಿದ್ದಾರೆ.

ಇದನ್ನೂ ಓದಿ:ಹಿಜಾಬ್ ನಿರ್ಬಂಧ: ಹೈಕೋರ್ಟ್ ಮಹತ್ವದ ತೀರ್ಪು, ಸರ್ಕಾರದ ನಿಲುವಿಗೆ ಆನೆಬಲ

‘ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರ ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಗ್ಗೆ 10.35ಕ್ಕೆ ಪ್ರಕಟಿಸಿತು.

ಇದನ್ನೂ ಓದಿ:LIVE | ಹಿಜಾಬ್ ನಿರ್ಬಂಧದ ಆದೇಶ ಎತ್ತಿಹಿಡಿದ ಹೈಕೋರ್ಟ್: ಹಲವೆಡೆ ನಿಷೇಧಾಜ್ಞೆ, ವಿಜಯೋತ್ಸವ–ಪ್ರತಿಭಟನೆಗೆ ನಿರ್ಬಂಧ Live

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.