ಮುಂಬೈ: ಕಳೆದ 28 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ ಗುಂಪಿನ ಸದಸ್ಯನೊಬ್ಬನನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ.

1994ರಲ್ಲಿ ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಶಬಿರ್ ಬರ್ಕತಲಿ ಲಖಾನಿ (59) ಎಂಬಾತನನ್ನು ಗುಜರಾತ್ನ ಸೂರತ್ನಲ್ಲಿ ಮುಂಬೈ ಅಪರಾಧ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾತಕಿ ಛೋಟಾ ರಾಜನ್ ಗುಂಪಿನ ಸದಸ್ಯನಾಗಿದ್ದ ಈತ ಸೇರಿದಂತೆ ನಾಲ್ವರು 1994ರಲ್ಲಿ ದರೋಡೆ ಮಾಡುವ ಉದ್ದೇಶದಿಂದ ಮುಂಬೈ ಹೊರವಲಯದಲ್ಲಿರುವ ಚೆಂಬೂರ್ನಲ್ಲಿರುವ ರಿಯಲ್ ಎಸ್ಟೇಟ್ ಮಧ್ಯವರ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಅಪರಾಧ ಘಟಕದ ಅಧಿಕಾರಿಯೊಬ್ಬರ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ದರೋಡೆಗೆ ಯತ್ನ, ಹತ್ಯೆಗೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾದ ಐವರಿಗೆ ಸ್ಥಳೀಯ ನ್ಯಾಯಾಲಯವು ಐದು ವರ್ಷ ಸಜೆ ವಿಧಿಸಿತ್ತು.

ಈ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದರೆ, ಲಖಾನಿ ಹಾಗೂ ಮತ್ತೊಬ್ಬ ಅಪರಾಧಿಯು 1995ರಲ್ಲಿ ತಲೆ ಮರೆಸಿಕೊಂಡಿದ್ದರು. ಈ ಇಬ್ಬರ ವಿರುದ್ಧ ನ್ಯಾಯಾಲಯದ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.