ನವದೆಹಲಿ: ಹಲವು ವರ್ಷಗಳ ಹಿಂದೆ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ ಅದೇ ಮಹಿಳೆಯ ಮೇಲೆ ಮತ್ತೊಮ್ಮೆ ಆ್ಯಸಿಡ್ ಎಸೆಯುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗೆ ಮಹಿಳೆಯು ದೂರದ ಸಂಬಂಧಿಯಾಗಿದ್ದು, ಕೆಲ ಎನ್‌ಜಿಒ ಕಾರ್ಯಕರ್ತರ ಮುಂದೆ ಸುಲ್ತಾನಪುರಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದಾರೆ.

ಈಗಾಗಲೇ ಆ್ಯಸಿಡ್ ದಾಳಿ ನಡೆಸಿದ್ದ ವ್ಯಕ್ತಿಯು ಮತ್ತೆ ತನ್ನ ಹಾಗೂ ತನ್ನ ಕುಟುಂಬದವರ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಮಹಿಳೆ ದೂರಿದ್ದಾರೆ.

ಆಕೆಯ ದೂರನ್ನು ಆಧರಿಸಿ ಈಗಾಗಲೇ ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಆಕೆ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಕ್ಕಾಗಿ ವ್ಯಕ್ತಿಗೆ ಉತ್ತರ ಪ್ರದೇಶದಲ್ಲಿ 7 ವರ್ಷಗಳ ಜೈಲು ಶಿಕ್ಷೆಯಾಗಿತ್ತು. 2011ರಲ್ಲಿ ಆತ ಜೈಲಿನಿಂದ ಹೊರಬಂದಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.