ಇಂಫಾಲ್: ‘ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ’ ಎಂದು ಪೊಲೀಸರು ಶನಿವಾರ ತಿಳಿಸಿದರು.

‘ಡಿ.ಎಂ ಕಾಲೇಜಿನ ಸಂಕೀರ್ಣದಲ್ಲಿ ಶುಕ್ರವಾರ ರಾತ್ರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಯಿನಮ್ ಕೆನೆಗಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವೀಗೀಡಾಗಿದ್ದಾನೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ಹೇಳಿದರು.

‘ಇಲ್ಲಿಯವರೆಗೆ ಯಾವುದೇ ಸಂಘಟನೆಯು ಬಾಂಬ್ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಈ ಮಧ್ಯೆ ಇಂಫಾಲ್ ಪಶ್ಚಿಮ ಜಿಲ್ಲೆಯ ಲಾಮ್‌ಫೆಲ್‌ಪಾತ್‌ನಲ್ಲಿರುವ ಯುನೈಟೆಡ್ ಕಮಿಟಿ ಮಣಿಪುರ ಎಂಬ ಸಂಘಟನೆಯ ಕಚೇರಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ’ ಎಂದಿದ್ದಾರೆ.

‘ಅಲ್ಲದೇ ಇಂಫಾಲ್ ಪೂರ್ವ ಜಿಲ್ಲೆಯಲ್ಲಿರುವ ಶಾಲೆಯೊಂದರ ಆಡಳಿತ ವಿಭಾಗಕ್ಕೆ ಕೆಲವು ಅಪರಿಚಿತ ವ್ಯಕ್ತಿಗಳು ಶುಕ್ರವಾರ ಬೆಂಕಿ ಹಚ್ಚಿದ್ದಾರೆ. ಶಾಲೆಯ ಆವರಣದಲ್ಲಿದ್ದ ವಾಹನವೂ ಸುಟ್ಟು ಕರಕಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.