ತಿರುವನಂತಪುರ: ಕೇರಳದ ಕೊಚ್ಚಿಯ ಕಲಮಸ್ಸೇರಿ ಧಾರ್ಮಿಕ ಸಮಾವೇಶದ ಸಂದರ್ಭ ಇಂದು ಬೆಳಿಗ್ಗೆ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿ ತ್ರಿಶೂರ್ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಎಂ ಆರ್ ಅಜಿತ್ ಕುಮಾರ್ ತಿಳಿಸಿದ್ದಾರೆ. ಆತ ಸ್ಫೋಟದ ಹೊಣೆ ಹೊತ್ತುಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ಸ್ಫೋಟಕ್ಕೆ ನಾನೇ ಕಾರಣ ಎಂದು ಹೇಳಿಕೊಂಡ ಆ ವ್ಯಕ್ತಿ ಬೆಳಗ್ಗೆ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಳಿಗ್ಗೆ ಸಂಭವಿಸಿದ್ದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೆ, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಡಿಜಿಪಿ ಸುದ್ದಿಗಾರರಿಗೆ ತಿಳಿಸಿದರು.

‘ಶರಣಾದ ವ್ಯಕ್ತಿಯ ಹೆಸರು ಡೊಮಿನಿಕ್ ಮಾರ್ಟಿನ್. ಅವನು ತನ್ನ ವಾದವನ್ನು ಬೆಂಬಲಿಸುವ ಸಾಕ್ಷ್ಯವನ್ನು ಸಹ ನೀಡಿದ್ದಾನೆ. ಕೃತ್ಯಕ್ಕೆ ನೀಡಿದ ಕಾರಣ ಮತ್ತು ಸಾಕ್ಷ್ಯಗಳನ್ನು ಸಹ ಪರಿಶೀಲಿಸುತ್ತಿದ್ದೇವೆ’ಎಂದು ಎಡಿಜಿಪಿ ಹೇಳಿದರು. ಆ ವ್ಯಕ್ತಿ ತಾನು ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ ಎಂದೂ ಅವರು ಹೇಳಿದರು.

ಈ ಘಟನೆಯು ಪೊಲೀಸರ ಗುಪ್ತಚರ ವೈಫಲ್ಯದ ಪರಿಣಾಮವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಎಡಿಜಿಪಿ, ಎಲ್ಲಾ ಪೊಲೀಸ್ ಇಲಾಖೆಯ ಶಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಇದಕ್ಕೂ ಮುನ್ನ, ತಿರುವನಂತಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಿಜಿಪಿ, ಪ್ರಾಥಮಿಕ ತನಿಖೆಯ ಪ್ರಕಾರ ಐಇಡಿಯಿಂದಾಗಿ ಸ್ಫೋಟಗಳು ಸಂಭವಿಸಿವೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದರು.
.ಕೊಚ್ಚಿಯ ಸಮಾವೇಶ ಕೇಂದ್ರದಲ್ಲಿ ಸ್ಫೋಟಕ್ಕೆ ಐಇಡಿ ಬಳಕೆ: ಕೇರಳ ಡಿಜಿಪಿ .ಸ್ಫೋಟ: ಕೇರಳ ಸಿಎಂ ಜೊತೆ ಅಮಿತ್ ಶಾ ಚರ್ಚೆ– ಎನ್ಎಸ್ಜಿ, ಎನ್ಐಎ ತಂಡಗಳು ದೌಡು .ಕೇರಳ ಕಳಮಶ್ಶೇರಿ ಸರಣಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.