ಚೆನ್ನೈ: ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮತ್ತೊಂದು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದಿದೆ.

ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ನಿವಾಸಿ ಸತೀಶ್ ಅವರು ಕಳೆದ ವರ್ಷ ಒಕಿನಾವಾ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಖರೀದಿಸಿದ್ದರು.

ಶನಿವಾರ ಮುಂಜಾನೆ ಸತೀಶ್ ತಮ್ಮ ಕಚೇರಿಯ ಸಮೀಪ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸ್ಟಾರ್ಟ್ ಮಾಡಲು ಮುಂದಾಗಿದ್ದಾರೆ. ಆಗಲೇ ಸೀಟ್ ಕೆಳಗೆ ಹೊಗೆ ಹೊರಹೊಮ್ಮುವುದನ್ನು ಗಮನಿಸಿದ್ದಾರೆ. ಅವರು ಸೀಟ್ ಅನ್ನು ಎತ್ತಿದ ಸ್ವಲ್ಪ ಸಮಯದ ನಂತರ, ಬೆಂಕಿ ಆವರಿಸಿಕೊಂಡು ಅವರ ಸ್ಕೂಟರ್ ಸುಟ್ಟುಹೋಗಿದೆ.

ಕೂಡಲೇ ಸ್ಥಳೀಯರ ಸಹಾಯದಿಂದ ಸತೀಶ್ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ವೇಳೆಗಾಗಲೇ ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಬ್ಯಾಟರಿ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಹೀಗಾಗಿಯೇ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ತಯಾರಕ ಕಂಪನಿಗಳಾದ ಒಕಿನಾವಾ ಮತ್ತು ಓಲಾ ಹಲವಾರು ವಾಹನಗಳನ್ನು ಹಿಂಪಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.