ನವದೆಹಲಿ: ‘ಕೇಂದ್ರ ಸಚಿವ ಸಂಪುಟವು ಬುಧವಾರ ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯು ಕಾರ್ಯಸಾಧುವಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಒಂದು ದೇಶ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ‘ಕೆಲ ರಾಜ್ಯಗಳ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರವನ್ನು ಹೂಡಿದೆ’ ಎಂದಿದ್ದಾರೆ.

‘ಇದು ಪ್ರಾಯೋಗಿಕವಾಗಿ ಅಸಾಧ್ಯ. ಯಾವುದೇ ಚುನಾವಣೆ ಬಂದರೂ, ಒಂದು ವಿಷಯವನ್ನು ಚರ್ಚೆಗೆ ಹುಡುಕಿಕೊಳ್ಳುವುದು ಬಿಜೆಪಿಯವರ ತಂತ್ರ. ಇದರಿಂದ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಿ, ಈ ವಿಷಯವನ್ನೇ ಚರ್ಚಿಸುವಂತೆ ಮಾಡುತ್ತಾರೆ’ ಎಂದಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ಘೋಷಣೆ ಸಂದರ್ಭದಲ್ಲಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ, ಒಂದು ಚುನಾವಣೆ’ ಕುರಿತ ತನ್ನ ವರದಿಯನ್ನು ಸಲ್ಲಿಸಿತ್ತು.
.'ಒಂದು ರಾಷ್ಟ್ರ, ಒಂದು ಚುನಾವಣೆ': ಕೋವಿಂದ್ ಸಮಿತಿ ವರದಿ ಅನುಮೋದಿಸಿದ ಮೋದಿ ಸಂಪುಟ.ಆಳ ಅಗಲ | ಒಂದು ದೇಶ ಒಂದು ಚುನಾವಣೆ: ಸಾಧಕ – ಬಾಧಕಗಳ ಸುತ್ತ.ಒಂದು ದೇಶ, ಒಂದೇ ಚುನಾವಣೆ: 18 ಸಾವಿರಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ.ಸಂಪಾದಕೀಯ | ‘ಒಂದು ದೇಶ, ಒಂದು ಚುನಾವಣೆ’ ವಿವೇಕಯುತ ನಡೆಯಾಗಲಾರದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.