ನವದೆಹಲಿ: ‘ಭಾರತದ ರಾಜ್ಯ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ನಿಯಮವು ಸೋಮವಾರದಿಂದ ಜಾರಿಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಒಂದೇ ವಾಹನ ಹಲವು ಫಾಸ್ಟ್ಯಾಗ್ಗಳನ್ನು ಅಳವಡಿಸಿಕೊಂಡಿದ್ದರೆ, ಅವು ಏಪ್ರಿಲ್ 1ರಿಂದ ಕಾರ್ಯನಿರ್ವಹಿಸುವುದಿಲ್ಲ’ ಎಂದೂ ಅವರು ಹೇಳಿದ್ದಾರೆ.

ಈ ನಿಯಮವು ಹಲವು ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಅನ್ನು ಬಳಸುವುದಕ್ಕೆ ಮತ್ತು ಒಂದೇ ವಾಹನಕ್ಕೆ ಹಲವು ಫಾಸ್ಟ್ಯಾಗ್ಗಳನ್ನು ಉಪಯೋಗಿಸುವುದಕ್ಕೆ ತಡೆ ಒಡ್ಡುತ್ತದೆ.

ಪೇಟಿಎಂ ಫಾಸ್ಟ್ಯಾಗ್ ಬಳಕೆದಾರರು ತೊಂದರೆಗಳನ್ನು ಅನುಭವಿಸುವ ಸಾಧ್ಯತೆ ಇರುವುದರಿಂದ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಉಪಕ್ರಮವನ್ನು ಅಳವಡಿಸಿಕೊಳ್ಳಲು ವಾಹನ ಸವಾರರಿಗೆ ಮಾರ್ಚ್ ಅಂತ್ಯದವರೆಗೆ ಕಾಲಾವಕಾಶ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.