ತಿರುವನಂತಪುರ: ಅನಾರೋಗ್ಯದ ಕಾರಣ ಇಲ್ಲಿನ ಆಸ್ಪತ್ರೆಗೆ ದಾಖಲಾಗಿರುವ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಶನಿವಾರ ಹೇಳಿದ್ದಾರೆ.

‘ಚಾಂಡಿ ಅವರು ಈಗ ನ್ಯುಮೋನಿಯಾದಿಂದ ಮುಕ್ತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ’ ಎಂದೂ ತಿಳಿಸಿದ್ದಾರೆ.

‘ಪಕ್ಷದ ಅಧ್ಯಕ್ಷರ ಸೂಚನೆಯಂತೆ ಆಸ್ಪತ್ರೆಗೆ ತೆರಳಿ ಚಾಂಡಿ ಅವರನ್ನು ಭೇಟಿಯಾಗಿದ್ದೇನೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುಲು ಬೇಕಾಗಿರುವ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಪಕ್ಷ ಮಾಡಲಿದೆ’ ಎಂದೂ ವಿವರಿಸಿದ್ದಾರೆ.

‘ತಂದೆಯ ಆರೋಗ್ಯದ ವಿಚಾರದಲ್ಲಿ ತಮ್ಮ ಕುಟುಂಬದ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ’ ಎಂದು ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.