ನವದೆಹಲಿ: ರೈತರು ಬೆಳೆದ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯ ಅಡಿಯಲ್ಲಿ ಖರೀದಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ವಿರೋಧ ಪಕ್ಷದ ಸಂಸದರು ಗುರುವಾರ ಸಂಸತ್ ಆವರಣದಲ್ಲಿ ಪ್ರತಿಭಟಿಸಿದರು.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ– ಶರದ್‌ಬಣ) ಶಿವಸೇನಾ (ಉದ್ಧವ್ ಬಣ)ದ ಸಂಸದರು ಸಂಸತ್‌ನ ‘ಮಕರ್‌ದ್ವಾರ’ದ ಮುಂಭಾಗದಲ್ಲಿ ಧರಣಿ ನಡೆಸಿದರು.

ತರಕಾರಿಯ ಹಾರ ಧರಿಸಿದ ಸಂಸದರು, ‘ರೈತರು ಬೆಳೆದ ಬೆಳೆಗಳಿಗೆ ಎಂಎಸ್‌ಪಿ ನೀಡಿ’, ‘ರೈತರಿಗೆ ಅನ್ಯಾಯ ಮಾಡಬೇಡಿ’ ಎಂದು ಘೋಷಣೆ ಕೂಗಿದರು.

‘ತೆಲುಗು ದೇಶಂ (ಟಿಡಿಪಿ) ಹಾಗೂ ಜೆಡಿಯು ಪಕ್ಷಕ್ಕೆ ಬಿಜೆಪಿ ಕನಿಷ್ಠ ಬೆಂಬಲ ನೀಡಿದಂತೆಯೇ, ರೈತರ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ಇದಕ್ಕಾಗಿಯೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಶಿವಸೇನಾ (ಉದ್ಧವ್ ಬಣ) ಸಂಸದೆ ಪ್ರಿಯಾಂಕ ಚತುರ್ವೇದಿ ಒತ್ತಾಯಿಸಿದರು.

‘ಮಹಾರಾಷ್ಟ್ರದಲ್ಲಿ ಈರುಳ್ಳಿ ಮೇಲೆ ವಿಧಿಸಿರುವ ರಫ್ತು ನಿಷೇಧವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ತಿಳಿಸಿದರು.

‘ರೈತರಿಗೆ ನ್ಯಾಯ ಒದಗಿಸುವುದು ನಮ್ಮ ಉದ್ದೇಶವಾಗಿದ್ದು, ಅದಕ್ಕಾಗಿ ಧ್ವನಿ ಎತ್ತುತ್ತಿದ್ದೇವೆ’ ಎಂದು ಸಂಸದರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.