ನವದೆಹಲಿ: ವಿಪಕ್ಷಗಳ 92 ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸಂಸದರು ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಂಸತ್ ಭದ್ರತಾ ವೈಫಲ್ಯದ ಕುರಿತಂತೆ ಸದನದ ಮುಂದೆ ಗೃಹಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳ ಸಂಸದರು ಕಲಾಪಕ್ಕೆ ಅಡ್ಡಿಪಡಿಸಿದ್ದರು. ಈ ವಿಚಾರವಾಗಿ ರಾಜ್ಯಸಭೆ ಮತ್ತು ಲೋಕಸಭೆಯಿಂದ ಇಲ್ಲಿಯವರಗೆ ಒಟ್ಟು 92 ಸಂಸದರನ್ನು ಅಮಾನತು ಮಾಡಲಾಗಿದೆ.

ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಸಂಸದರು, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ್ದಾರೆ. ಪೋಸ್ಟರ್ಗಳನ್ನು ಪ್ರದರ್ಶಿಸುವುದರ ಮೂಲಕ ಸಂಸದರ ಅಮಾನತಿಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ, ಸಂಸತ್ತಿನ ಕಲಾಪಗಳ ಅಣಕು ಪ್ರದರ್ಶನವನ್ನೂ ನಡೆಸಲಾಗಿದ್ದು, ತೃಣಮೂಲ ಕಾಂಗ್ರೆಸ್ನ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಸಭಾಧ್ಯಕ್ಷರ ಹಾವಭಾವಗಳನ್ನು ಅನುಕರಣೆ ಮಾಡಿ ತೋರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.