ನವದೆಹಲಿ: ಅಂಪನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಂಭವಿಸಿರುವ ಹಾನಿಯನ್ನು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ 22 ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯಗಳಿಗೆ ಹೆಚ್ಚಿನ ಸಹಾಯ ನೀಡಬೇಕು ಎಂದೂ ಆಗ್ರಹಿಸಿವೆ.

ಈ ವಿಚಾರವಾಗಿ ಪ್ರತಿಪಕ್ಷಗಳ ಮುಖಂಡರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಚಂಡಮಾರುತದಿಂದ ಸಂಕಷ್ಟಕ್ಕೀಡಾದವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಅಂಪನ್ ನರ್ತನ; ಕೇಂದ್ರದಿಂದ ₹1,000 ಕೋಟಿ ನೆರವು–ಮೋದಿ

‘ಅಂಪನ್ ಚಂಡಮಾರುತದಿಂದ ತತ್ತರಿಸಿದ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಸರ್ಕಾರಗಳು ಮತ್ತು ಜನರಿಗೆ ನಮ್ಮ ಬೆಂಬಲ ಸದಾ ಇದೆ’ ಎಂದು ಪ್ರತಿಪಕ್ಷಗಳು ಕೈಗೊಂಡಿರುವ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾ ವೈರಸ್ ಸಂಕಟದ ಬೆನ್ನಲ್ಲೇ ಅಂಪನ್ ಚಂಡಮಾರುತವೂ ಅಪ್ಪಳಿಸಿದ್ದು ಸಮಸ್ಯೆಯನ್ನು ದುಪ್ಪಟ್ಟುಗೊಳಿಸಿದೆ. ಸಾಂಕ್ರಾಮಿಕದ ವಿರುದ್ಧದ ಜನರ ಉತ್ಸಾಕ್ಕೆ ತಡೆಯೊಡ್ಡಿದೆ ಎಂದೂ ನಿರ್ಣಯದಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.