ಸಿರ್ಸಾ (ಹರಿಯಾಣ): ಅತ್ಯಾಚಾರ ಪ್ರಕರಣದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುರ್ಮೀತ್ ಸಿಂಗ್ ಪೆರೋಲ್‌ನಡಿ ಜೈಲಿನಿಂದ ಹೊರಬಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಬಿಜೆಪಿ ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ಪ್ರಸ್ತುತ ಪೆರೋಲ್‌ನಲ್ಲಿ ಜೈಲಿನಿಂದ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್, ಹರಿಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಸೋಮವಾರ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದರು. ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರಿಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಪ್ರಧಾನ ಪಂಥದ ಮುಖ್ಯಸ್ಥ, 40 ದಿನಗಳ ಪೆರೋಲ್ ಮೇಲೆ ಶನಿವಾರ ಹರಿಯಾಣದ ರೋಹ್ಟಕ್‌ನಲ್ಲಿರುವ ಸುನಾರಿಯಾ ಜೈಲಿನಿಂದ ಹೊರಬಂದು, ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಬರ್ನಾವಾ ಆಶ್ರಮ ಪ್ರವೇಶಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ವರ್ಚ್ಯುವಲ್ ಆಗಿ ಭಾಗವಹಿಸಿದ್ದ ಬಿಜೆಪಿ ನಾಯಕರು ಮತ್ತು ಇತರರು, ಜನವರಿ 25 ರಂದು ನಡೆಯಲಿರುವ ಡೇರಾ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಸಿಂಗ್ ಅವರ ಜನ್ಮದಿನಕ್ಕೆ ತಮ್ಮ ಶುಭಾಶಯ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.