ನವದೆಹಲಿ: ‘ದೇಶದಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ 14 ಸಾವಿರಕ್ಕೂ ಅಧಿಕ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇವೆ’ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

‘ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು (1,277) ಹುದ್ದೆಗಳು ಖಾಲಿ ಇವೆ. ತಮಿಳುನಾಡು (1,220), ಕರ್ನಾಟಕ (1,053) ಮತ್ತು ಪಶ್ಚಿಮ ಬಂಗಾಳದಲ್ಲೂ (1,043) ಗರಿಷ್ಠ ಹುದ್ದೆಗಳು ಭರ್ತಿಯಾಗದೆ ಉಳಿದಿವೆ. ಸಿಕ್ಕಿಂ (12) ರಾಜ್ಯದಲ್ಲಿ ಅತಿ ಕಡಿಮೆ ಹುದ್ದೆಗಳು ಖಾಲಿ ಇವೆ’ ಎಂದು ಸಚಿವಾಲಯ ಹಂಚಿಕೊಂಡಿರುವ ದತ್ತಾಂಶದಲ್ಲಿ ಉಲ್ಲೇಖಿಸಲಾಗಿದೆ.

ಲೋಕಸಭೆಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವೆ ಅನ್ನಪೂರ್ಣ ದೇವಿ, ‘ದೇಶದಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ 14,461 ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇರುವುದಾಗಿ ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಮಾಹಿತಿ ನೀಡಿದೆ. ಈ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ. ಈ ಸಂಬಂಧ ಇತ್ತೀಚೆಗೆ ಜಾಹೀರಾತು ನೀಡಲಾಗಿದೆ’ ಎಂದಿದ್ದಾರೆ.

‘ಮಕ್ಕಳ ಕಲಿಕಾ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.

ವರ್ಗಾವಣೆ ಪ್ರಕ್ರಿಯೆ ರದ್ದು: ‘ಕೇಂದ್ರೀಯ ವಿದ್ಯಾಲಯದ ಶಿಕ್ಷಕರ ಮನವಿ ಮೇರೆಗೆ ಮಾಡಲಾಗುವ ವರ್ಗಾವಣೆ ಪ್ರಕ್ರಿಯೆಯನ್ನು ಈ ಬಾರಿ (2022–23) ರದ್ದು ಮಾಡಲಾಗಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.