ನವದೆಹಲಿ: ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ (ಪಿಎಸ್ಯು) ಎರಡು ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ. ಪಿಎಸ್ಯುಗಳು ದೇಶದ ಹೆಮ್ಮೆಯಾಗಿದ್ದವು. ಉದ್ಯೋಗಕ್ಕಾಗಿ ಪ್ರತಿಯೊಬ್ಬರ ಕನಸಾಗಿತ್ತು. ಆದರೆ ಇಂದು ಪಿಎಸ್ಯು ಸರ್ಕಾರದ ಆದ್ಯತೆಯಾಗಿ ಉಳಿದಿಲ್ಲ. ಬಂಡವಾಳಶಾಹಿ ಮಿತ್ರರ ಲಾಭಕ್ಕಾಗಿ ಲಕ್ಷಾಂತರ ಜನರ ಕನಸನ್ನು ಭಗ್ನಗೊಳಿಸಲಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ದೇಶದ ಪಿಎಸ್ಯುಗಳಲ್ಲಿ ಉದ್ಯೋಗಾವಕಾಶವು 2014ರಲ್ಲಿ 16.9 ಲಕ್ಷದಿಂದ 2022ರಲ್ಲಿ 14.6 ಲಕ್ಷಕ್ಕೆ ಇಳಿಕೆಯಾಗಿದೆ. ಪ್ರಗತಿಶೀಲ ರಾಷ್ಟ್ರದಲ್ಲಿ ಉದ್ಯೋಗಗಳು ಕಡಿತವಾಗುತ್ತವೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಪಿಎಸ್ಯುನಲ್ಲಿ ಉದ್ಯೋಗ ಕಡಿತಕ್ಕೆ ಸಂಬಂಧಿಸಿದಂತೆ ರಾಹುಲ್ ನೀಡಿರುವ ಪಟ್ಟಿ:

ಬಿಎಸ್ಎನ್ಎಲ್: 1,81,127

ಸೇಲ್ (SAIL): 61,928

ಎಂಟಿಎನ್ಎಲ್: 34,997

ಎಸ್ಇಎಸ್ಎಲ್: 29,140

ಎಫ್ಸಿಐ: 28,063

ಒಎನ್ಜಿಸಿ: 21,120

ಪ್ರಧಾನಿ ಮೋದಿ ಸರ್ಕಾರವು ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳ ಸುಳ್ಳು ಭರವಸೆಯನ್ನು ನೀಡಿದೆ. ಆದರೆ ಭರವಸೆ ಈಡೇರಿಸುವ ಬದಲು ಎರಡೂ ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಪಿಎಸ್ಯುಗಳನ್ನು ಖಾಸಗೀಕರಣಗೊಳಿಸುವ ಷಡ್ಯಂತ ಮಾಡಲಾಗುತ್ತದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೊಡ್ಡ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಮತ್ತೊಂದೆಡೆ ಸರ್ಕಾರಿ ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ. ಇದೆಂಥಹ ಅಮೃತಕಾಲ ಎಂದು ಪ್ರಶ್ನಿಸಿದ್ದಾರೆ.

ಪಿಎಸ್ಯುಗಳಿಗೆ ಸರ್ಕಾರದಿಂದ ಸರಿಯಾದ ಬೆಂಬಲ ದೊರಕಿದರೆ ದೇಶದ ಆರ್ಥಿಕತೆ ಹಾಗೂ ಉದ್ಯೋಗ ಅವಕಾಶವನ್ನು ಹೆಚ್ಚಿಸುವ ಸಮರ್ಥವಾಗಿವೆ. ಪಿಎಸ್ಯು ದೇಶ ಮತ್ತು ದೇಶವಾಸಿಗಳ ಆಸ್ತಿಯಾಗಿದ್ದು, ಭಾರತದ ಪ್ರಗತಿಯ ಹಾದಿಯನ್ನು ಬಲಪಡಿಸಲು ಅವುಗಳನ್ನು ಉತ್ತೇಜಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.