ನವದೆಹಲಿ: 2018ರಿಂದ 2023ರ ಒಳಗೆ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ಗಳು ಮತ್ತು ಒಳಚರಂಡಿಗಳನ್ನು ಸ್ವಚ್ಚಗೊಳಿಸುವ ವೇಳೆ 400ಕ್ಕೂ ಹೆಚ್ಚು ಸಫಾಯಿ ಕರ್ಮಾಚಾರಿಗಳು ಮೃತಪಟ್ಟಿದ್ದಾರೆ ಎಂದು ಸಂಸತ್ತಿಗೆ ಮಂಗಳವಾರ ಲಿಖಿತ ರೂಪದ ಉತ್ತರದ ಮೂಲಕ ತಿಳಿಸಲಾಯಿತು.

ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಛಗೊಳಿಸುವ ವ್ಯವಸ್ಥೆ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯೆ ಅನುರೂಪ ಪೊದ್ದಾರ್ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ರಾಮದಾಸ್ ಅಠಾವಳೆ ಅವರು ಉತ್ತರ ನೀಡಿದರು.

ಸಚಿವರು ನೀಡಿದ ದತ್ತಾಂಶದ ಪ್ರಕಾರ, 2018ರಲ್ಲಿ ಸೆಪ್ಟಿಕ್ ಟ್ಯಾಂಕ್‌ಗಳನ್ನು ಮತ್ತು ಒಳಚರಂಡಿಗಳನ್ನು ಸ್ವಚ್ಛಗೊಳಿಸುವ ವೇಳೆ 76 ಮಂದಿ ಮೃತಪಟ್ಟಿದ್ದಾರೆ. 2019ರಲ್ಲಿ 133 ಮಂದಿ, 2020ರಲ್ಲಿ 35, 2021ರಲ್ಲಿ 66, 2022ರಲ್ಲಿ 84 ಮತ್ತು 2023ರಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.