ಬುಧವಾರ, 2 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯಲ್ಲಿ ಡ್ರಗ್ಸ್ ಮಾಫಿಯಾ: ₹ 2,000 ಕೋಟಿ ಬೆಲೆಯ 500 ಕೆ.ಜಿ ಕೊಕೇನ್ ವಶ

Published : 2 ಅಕ್ಟೋಬರ್ 2024, 9:41 IST
Last Updated : 2 ಅಕ್ಟೋಬರ್ 2024, 9:41 IST
ಫಾಲೋ ಮಾಡಿ
Comments

ನವದೆಹಲಿ: ಅಂತರರಾಷ್ಟ್ರೀಯ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು, ಅಂದಾಜು ₹ 2,000 ಕೋಟಿ ಬೆಲೆಯ 565 ಕೆ.ಜಿ ಕೊಕೇನ್‌ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಳೆದ ಎರಡು ತಿಂಗಳಿನಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದ ದೆಹಲಿ ಪೊಲೀಸ್‌ ವಿಶೇಷ ದಳ, ಹಬ್ಬಗಳ ಋತು ಆರಂಭಕ್ಕೂ ಮುನ್ನ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ದೆಹಲಿ ಹಾಗೂ ಎನ್‌ಸಿಆರ್‌ (ರಾಷ್ಟ್ರ ರಾಜಧಾಣಿ ಪ್ರದೇಶ) ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯೋಜಿಸಿದ್ದರು. ಸದ್ಯ ಅವರನ್ನೆಲ್ಲ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT