ನವದೆಹಲಿ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್–19 ಲಸಿಕೆ ‘ಕೋವಿಶೀಲ್ಡ್’ (Covishield) ಪ್ರಯೋಗ ಆಗಸ್ಟ್ ಕೊನೆಯ ಭಾಗದಲ್ಲಿ ಭಾರತದಲ್ಲಿ ಶುರುವಾಗಲಿದೆ. 5 ಸಾವಿರ ಸ್ವಯಂಸೇವಕರು ಪ್ರಯೋಗಕ್ಕೆ ಒಳಪಡಲಿದ್ದಾರೆ.ಲಸಿಕೆ ಉತ್ಪಾದನೆಗೆ ಪುಣೆಯ ಔಷಧ ಉತ್ಪಾದಕ ಕಂಪನಿ ‘ಸೆರಂ’ ಜತೆ ವಿಶ್ವವಿದ್ಯಾಲಯ ಒಪ್ಪಂದ ಮಾಡಿಕೊಂಡಿದೆ.ಮಾನವನ ಮೇಲೆ ಪ್ರಯೋಗ ಕೈಗೊಳ್ಳುವ ಸಂಬಂಧ ಭಾರತದ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಆರಂಭಿಕ ಪರೀಕ್ಷೆಯು ಸುರಕ್ಷಿತ ಎಂದು ಸಾಬೀತಾಗಿದೆ. 3ನೇ ಹಂತದ ಪ್ರಯೋಗ ಪೂರ್ಣಗೊಳ್ಳಲು 2 ತಿಂಗಳ ಕಾಲಾವಕಾಶ ಅಗತ್ಯ. ಎಲ್ಲ ಅಂದುಕೊಂಡಂತೆ ನಡೆದರೆ, ನವೆಂಬರ್ ವೇಳೆಗೆ ಲಸಿಕೆ ಸಿಗುವ ಸಾಧ್ಯತೆಯಿದೆ.

ಪ್ರಯೋಗದ 3ನೇ ಹಾಗೂ ನಿರ್ಣಾಯಕ ಹಂತದಲ್ಲಿ ಲಸಿಕೆಯನ್ನು ಮಾರುಕಟ್ಟೆಗೆ ಪೂರೈಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ ಎಂದು ಸೆರಂ ಸಂಸ್ಥೆಯ ಸಿಇಒ ಅದರ್ ಪೂನಾವಾಲಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.