ಚಂಡೀಗಢ: ರಾಜ್ಯದ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮಾಸಿಕ ₹ 10 ಸಾವಿರ ಪಿಂಚಣಿ ನೀಡಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.

ಮಾಸಿಕ ಪಿಂಚಣಿ ಜೊತೆಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯ ಸರ್ಕಾರದ ‘ವೋಲ್ವೊ ಬಸ್’ ಸೇವೆಯಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಘೋಷಿಸಿದ್ದಾರೆ.

‘ಸರ್ಕಾರದ ಯೋಜನೆಗಳಿಂದ ಜನರು ನೇರ ಪ್ರಯೋಜನ ಪಡೆಯುತ್ತಿದ್ದಾರೆ. ಈಗ ಸಹಾಯದ ಮೊತ್ತ (ವಿವಿಧ ಯೋಜನೆಗಳ ಅಡಿ) ನೇರವಾಗಿ ಫಲಾನುಭವಿಯ ಖಾತೆಗೆ ಹೋಗುತ್ತದೆ. ವಾರ್ಷಿಕ ₹ 1.80 ಲಕ್ಷ ವರೆಗಿನ ಆದಾಯ ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ ₹ 5 ಲಕ್ಷ ವರೆಗಿನ ಆರೋಗ್ಯ ವಿಮೆ ಪ್ರಯೋಜನವನ್ನು ನೀಡುತ್ತಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.