ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪಾಕಿಸ್ತಾನ ಸಂಸತ್ ಮಂಗಳವಾರ ಸಮಾವೇಶಗೊಳ್ಳಲಿದೆ.ಭಾರತದ ನಡೆ ಅಕ್ರಮ ಹಾಗೂ ಏಕಪಕ್ಷೀಯ ಎಂದು ಟೀಕಿಸಿರುವ ಪಾಕಿಸ್ತಾನ, ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಎಚ್ಚರಿಕೆಯನ್ನೂ ರವಾನಿಸಿದೆ.

ವಿಷಯವನ್ನು ಅಂತರರಾಷ್ಟ್ರೀಯ ವೇದಿಕೆಯ ಗಮನಕ್ಕೆ ತರುವ ಎಲ್ಲ ಯತ್ನಗಳನ್ನು ಮಾಡುವುದಾಗಿ ಪಾಕಿಸ್ತಾನ ತಿಳಿಸಿದೆ.

‘ಭಾರತ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಬದಲಾವಣೆ ತರುವ ಯತ್ನವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳು ಹಾಗೂ ಕಾಶ್ಮೀರಿ ಜನರ ಭಾವನೆಗಳಿವೆ ವಿರುದ್ಧವಾಗಿದೆ. ಕಾಶ್ಮೀರಿಗಳ ಬಯಕೆಯಂತೆ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸುವುದನ್ನು ಪಾಕಿಸ್ತಾನ ಬೆಂಬಲಿಸುತ್ತದೆ’ ಎಂದು ಅಧ್ಯಕ್ಷ ಆರಿಫ್ ಅಲ್ವಿ ಟ್ವೀಟ್ ಮಾಡಿದ್ದಾರೆ.

ಅಮೆರಿಕ ವಿದೇಶಾಂಗ ಇಲಾಖೆಯ ದಕ್ಷಿಣ ಹಾಗೂ ಕೇಂದ್ರ ಏಷ್ಯಾದ ಸಹಾಯಕ ಕಾರ್ಯದರ್ಶಿ ಅಲೈಸ್ ಜಿ. ವೆಲ್ಸ್ ಅವರುಸದ್ಯ ಪಾಕಿಸ್ತಾನದ ಪ್ರವಾಸದಲ್ಲಿದ್ದು, ಕಾಶ್ಮೀರ ವಿಚಾರದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅವರ ಮನವೊಲಿಸಲು ಪಾಕ್ ಸಿದ್ಧತೆ ನಡೆಸಿದೆ. ಮಧ್ಯಸ್ಥಿಕೆ ವಹಿಸಲು ತಾವು ಸಿದ್ಧ ಎಂದು ಟ್ರಂಪ್ ಇತ್ತೀಚೆಗೆ ಹೇಳಿದ್ದರು. ಆದರೆ ಭಾರತ ಇದನ್ನು ತಳ್ಳಿಹಾಕಿತ್ತು.

ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಅವರು ಗಡಿಯಲ್ಲಿ ಭದ್ರತಾ ಸ್ಥಿತಿ ಪರಾಮರ್ಶೆ ನಡೆಸಲು ಮಂಗಳವಾರ ಕಮಾಂಡರ್ಗಳ ಸಭೆ ಕರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.