ನವದೆಹಲಿ: ಚೀನಾ ಮತ್ತು ಪಾಕಿಸ್ತಾನ ಎರಡೂ ಒಗ್ಗಟ್ಟಾಗಿ ರಾಷ್ಟ್ರೀಯ ಭದ್ರತೆಗೆ ಸವಾಲು ಒಡ್ಡುತ್ತಿದ್ದು, ಈ ವಿಷಯದಲ್ಲಿ ಎರಡೂ ರಾಷ್ಟ್ರಗಳ ನಡೆಯನ್ನು ಭಾರತ ಸುಲಭವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸೇನಾ ದಿನಾಚರಣೆಯ ಮುನ್ನಾದಿನವಾದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಲಡಾಖ್ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಬಳಿಯ ಪರಿಸ್ಥಿತಿಯನ್ನು ವಿವರಿಸಿದರು. ಈ ಪ್ರದೇಶದಲ್ಲಿ ಎದುರಾಗಬಹುದಾದ ಎಂಥದ್ದೇ ಪರಿಸ್ಥಿತಿಯನ್ನು ಎದುರಿಸಲು ಭಾರತೀಯ ಸೇನಾ ಪಡೆಗಳು ಸನ್ನದ್ಧವಾಗಿವೆ ಎಂದು ಹೇಳಿದರು.

‘ಭದ್ರತೆಯ ವಿಚಾರದಲ್ಲಿಚೀನಾ ಪೂರ್ವ ಲಡಾಖ್ನಲ್ಲಿನ ವಾಸ್ತವ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ನಿಯೋಜಿಸಿರುವ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ವಿಚಾರದಲ್ಲಿ ಒಂದು ಒಪ್ಪಂದಕ್ಕೆ ಬರುವ ವಿಶ್ವಾಸವಿದೆ‘ ಎಂದು ನರವಣೆ ಹೇಳಿದರು.

ಇದೇ ವೇಳೆ, ಪೂರ್ವ ಲಡಾಖ್ನ ಪಾಂಗೋಂಗ್ ಸರೋವರದ ದಕ್ಷಿಣ ಗಡಿ ಭಾಗದಲ್ಲಿ ಭಾರತೀಯ ಸೇನಾ ಪಡೆಗಳು ಅನುಸರಿಸುವ ಕಾರ್ಯತಂತ್ರ ವಿಧಾನಗಳನ್ನು ಉಲ್ಲೇಖಿಸಿದರು. ‘ ರಾಷ್ಟ್ರೀಯ ಹಿತಾಸಕ್ತಿ ಮತ್ತು ಗುರಿಯ ಆಧಾರದ ಮೇಲೆ ಪೂರ್ವ ಲಡಾಖ್ನಲ್ಲಿ ಸೇನೆಯನ್ನು ನಿಯೋಜಿಸಲಾಗುತ್ತದೆ‘ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.