ಶ್ರೀನಗರ:ಪಾಕಿಸ್ತಾನದ ಸೈನಿಕರು ಮಂಗಳವಾರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸೈನಿಕರ ಮೇಲೆ ಅಪ್ರಚೋದಿತ ಶೆಲ್ ಮತ್ತು ಗುಂಡಿನ ದಾಳಿ ನಡೆಸಿರುವುದಾಗಿ ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

ಜಿಲ್ಲೆಯ ಮಾನ್ಕೊಟ್ ವಲಯದಲ್ಲಿ ಈ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಈ ದಾಳಿಯಿಂದಾಗಿ ಭಾರತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬೆಳಿಗ್ಗೆ 3.20ಕ್ಕೆ ಪ್ರಾರಂಭವಾದ ಗುಂಡಿನ ದಾಳಿ 5 ಗಂಟೆಯವರೆಗೂ ಮುಂದುವರಿದಿತ್ತು. ಈ ಪ್ರದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳೀಯರು ಬಂಕರ್‌ಗಳಲ್ಲಿ ಆಶ್ರಯ ಪಡೆದಿದ್ದರು.

2019ರಲ್ಲಿ ಪಾಕಿಸ್ತಾನ 3,200 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು. ಈ ವರ್ಷ ಅದರ ಪ್ರಮಾಣ ಭಾರಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 2020ರ ಮೊದಲ ಆರು ತಿಂಗಳಲ್ಲಿ ಶೇ 75ರಷ್ಟು ಹೆಚ್ಚಳ ಕಂಡಿದೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.