ಕೋಲ್ಕತ್ತ : ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಎನ್ನಲಾದ ಶಂಕಿತ ವ್ಯಕ್ತಿಯನ್ನು ಕೋಲ್ಕತ್ತ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಬಿಹಾರ ನಿವಾಸಿಯಾಗಿದ್ದು, ಆತನಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೇಹುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಶುಕ್ರವಾರ ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಶಂಕಿತನನ್ನು ಹೌರಾದಲ್ಲಿರುವ ಆತನ ನಿವಾಸದಲ್ಲಿಯೇ ಬಂಧಿಸಲಾಗಿದೆ.

ಆತ ದೇಶದ ಸುರಕ್ಷತೆಗೆ ಹಾನಿಯುಂಟು ಮಾಡುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯ ಮೊಬೈಲ್ ಫೋನ್‌ನಲ್ಲಿ ಫೋಟೊ, ವಿಡಿಯೊ ಮತ್ತು ಆನ್‌ಲೈನ್ ಚಾಟ್‌ಗಳ ರೂಪದಲ್ಲಿ ರಹಸ್ಯ ಮಾಹಿತಿಗಳು ಕಂಡುಬಂದಿವೆ. ಇವುಗಳನ್ನು ಆತ ಪಾಕಿಸ್ತಾನದ ಶಂಕಿತ ಗುಪ್ತಚರರಿಗೆ ಕಳುಹಿಸಿದ್ದಾನೆ’ ಎಂದು ಅಧಿಕಾರಿ ಹೇಳಿದ್ದಾರೆ.

ಈ ಮುಂಚೆ ದೆಹಲಿಯಲ್ಲಿ ವಾಸವಿದ್ದ ಆರೋಪಿಯು ಸಧ್ಯ ಕೋಲ್ಕತ್ತಾದಲ್ಲಿ ಕೋರಿಯರ್ ಸರ್ವಿಸ್ ಕೆಲಸ ಮಾಡುತ್ತಿದ್ದ.

ಶನಿವಾರ ಆತನನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.