ಠಾಣೆ : ವ್ಯಕ್ತಿಯೊಬ್ಬನಿಂದ ₹ 15 ಲಕ್ಷ ಲಂಚ ಪಡೆಯುತ್ತಿದ್ದ ಕಾನ್‌ಸ್ಟೆಬಲ್‌ವೊಬ್ಬರನ್ನು ಬಂಧಿಸಲಾಗಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಇನ್ಸ್‌ಪೆಕ್ಟರ್ ತಲೆಮರೆಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

‘ವಂಚನೆ ಪ್ರಕರಣದ ಆರೋಪಿಯೊಬ್ಬನ ಬಳಿ ಇನ್ಸ್‌ಪೆಕ್ಟರ್ ಮಹೇಶ್ ಶೆಲರ್ ಮತ್ತು ಕಾನ್‌ಸ್ಟೇಬಲ್ ಗಣೇಶ್ ವಾನ್ವೆ ಎಂಬುವವರು ₹50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಬಳಿಕ ₹35 ಲಕ್ಷಕ್ಕೆ ಒಪ್ಪಂದವಾಗಿತ್ತು. ಲಂಚ ನೀಡಲು ಒಪ್ಪಿದ್ದ ವ್ಯಕ್ತಿಯು ಈ ಬಗ್ಗೆ ಎಸಿಬಿಗೆ ಮಾಹಿತಿ ನೀಡಿದ್ದರು’ ಎಂದು ಎಸಿಬಿ ಎಸ್ಪಿ ಸುನೀಲ್ ಲೋಖಂಡೆ ತಿಳಿಸಿದರು.

‘ಕಾನ್‌ಸ್ಟೆಬಲ್ ಗಣೇಶ್ ವಾನ್ವೆ, ಪಾಲ್ಘರ್ ಜಿಲ್ಲೆಯ ಮೀರಾ ರೋಡ್ ಬಳಿ ₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ನಡೆಸಿ, ಬಂಧಿಸಿದೆ‘ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.