ನವದೆಹಲಿ: ಮಹಿಳಾ ಮೀಸಲಾತಿ ಕಾನೂನನ್ನು ಪುದುಚೇರಿ ಹಾಗೂ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗಳಿಗೆ ವಿಸ್ತರಿಸಲು ಅವಕಾಶ ಕಲ್ಪಿಸುವ ಎರಡು ಮಸೂದೆಗಳಿಗೆ ರಾಜ್ಯಸಭೆಯು ಸೋಮವಾರ ಧ್ವನಿಮತದ ಮೂಲಕ ಅಂಗೀಕಾರ ನೀಡಿದೆ. ಈ ಮಸೂದೆಗಳಿಗೆ ಲೋಕಸಭೆಯ ಅಂಗೀಕಾರ ಡಿಸಂಬರ್ 12ರಂದು ದೊರೆತಿದೆ.

ಡಿಸೆಂಬರ್ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂಬ ಬೇಡಿಕೆಯೊಂದಿಗೆ ವಿರೋಧ ಪಕ್ಷಗಳ ಸದಸ್ಯರು ರಾಜ್ಯಸಭೆಯ ಸಭಾಪತಿಯ ಎದುರಿನ ಅಂಗಳಕ್ಕೆ ನುಗ್ಗಿ ಘೋಷಣೆ ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, ಜಮ್ಮು ಮತ್ತು ಕಾಶ್ಮೀರ ಮರುವಿಂಗಡಣೆ (ಎರಡನೆಯ ತಿದ್ದುಪಡಿ) ಮಸೂದೆಗೆ ಧ್ವನಿಮತದ ಮೂಲಕ ಅಂಗೀಕಾರ ನೀಡಲಾಯಿತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಈ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ಇವು ಮಹಿಳೆಯರ ಹಕ್ಕುಗಳ ಪರವಾಗಿ ಇವೆ ಎಂದರು. ಇದಾದ ತಕ್ಷಣ, ವಿರೋಧ ಪಕ್ಷಗಳ ಸದಸ್ಯರು ಶಾ ಅವರ ಹೇಳಿಕೆಗೆ ಒತ್ತಾಯಿಸಿ ಘೋಷಣೆ ಕೂಗಲು ಆರಂಭಿಸಿದರು. ವೈಎಸ್ಆರ್ ಕಾಂಗ್ರೆಸ್, ಬಿಜೆಪಿ, ಎಐಎಡಿಎಂಕೆ, ಟಿಡಿಪಿ, ಎಜಿಪಿ ಪಕ್ಷದ ಕೆಲವು ಸದಸ್ಯರು ಮಸೂದೆಯ ಪರವಾಗಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.